ಆಂಧ್ರಪ್ರದೇಶದಲ್ಲಿ ಭೀಕರ ಕಾರು ಅಪಘಾತ: ಸುಳ್ಯ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಸಾವು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಸುಳ್ಯ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರ (25) ಮೃತಪಟ್ಟಿದ್ದಾರೆ. ಸುಳ್ಯದ ಕಂದಡ್ಕ ನಿವಾಸಿ ಶಶಿಕಲಾ ಅವರ ಏಕೈಕ ಪುತ್ರಿಯಾಗಿದ್ದ ಇವರು, ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದರು. ರಜೆಯ ನಿಮಿತ್ತ ತನ್ನ ಸಹೋದ್ಯೋಗಿಗಳೊಂದಿಗೆ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕ್ಷಿಪ್ರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇತರ ಸಹೋದ್ಯೋಗಿಗಳಿಗೂ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಭಾವಂತ ಯುವತಿಯ ಅಕಾಲಿಕ ನಿಧನದಿಂದಾಗಿ ಸುಳ್ಯದ ಕಂದಡ್ಕ ಪರಿಸರದಲ್ಲಿ ಶೋಕದ ಛಾಯೆ ಆವರಿಸಿದೆ.







Comments