;
top of page

ಅಣ್ಣಾಮಲೈ ರಾಜೀನಾಮೆ ಅಂಗೀಕಾರ

  • Jun 5
  • 1 min read



ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ರಾಷ್ಟ್ರೀಯ ಅಧ್ಯಕ್ಷ ಅಂಗೀಕರಿಸಿದ್ದಾರೆ. ಈ ಮೂಲಕ ಅವರು ಬಿಜೆಪಿಯೊಂದಿಗೆ ಹೊಂದಿದ್ದ ಆರು ವರ್ಷಗಳ ಸುದೀರ್ಘ ಸಂಬಂಧಕ್ಕೆ ಅಂತ್ಯವನ್ನಿಟ್ಟಿದ್ದಾರೆ.


ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಇಂದು ಮಧ್ಯಾಹ್ನ ಅಣ್ಣಾಮಲೈ ಸುದ್ದಿಗೋಷ್ಠಿ ನಡೆಸಲಿದ್ದು, ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಮಹತ್ವದ ಮಾಹಿತಿ ನೀಡುವ ನಿರೀಕ್ಷೆಯಿದೆ.


ಇದಕ್ಕೂ ಮೊದಲು ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಅವರ ರಾಜಕೀಯ ನಡೆ ಬಗ್ಗೆ ಹಲವು ಊಹಾಪೋಹಗಳು ಕೇಳಿಬರುತ್ತಿದ್ದವು.


ಇತ್ತೀಚಿನ ವರದಿಗಳ ಪ್ರಕಾರ, ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ‘ಮಕ್ಕಳ್ ಶಕ್ತಿ ಇಯಕ್ಕಂ’ (ಜನಶಕ್ತಿ ಆಂದೋಲನ) ಎಂಬ ಹೊಸ ಜನಪರ ಸಂಘಟನೆಯನ್ನು ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಈ ಕುರಿತು ಅವರು ಇನ್ನೂ ಅಧಿಕೃತವಾಗಿ ಯಾವುದೇ ಸ್ಪಷ್ಟನೆ ನೀಡಿಲ್ಲ.


ಅಣ್ಣಾಮಲೈ ಅವರ ಮುಂದಿನ ಘೋಷಣೆ ತಮಿಳುನಾಡು ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿವೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page