ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 9ರಂದು ಪ್ರಕಟಿಸಲಿದೆ. ಅಂದು ಬೆಳಿಗ್ಗೆ ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡ ನಂತರ, ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ನಲ್ಲಿ ತಮ್ಮ ರಿಜಿಸ್ಟ್ರೇಶನ್ ನಂಬರ್ ಬಳಸಿ ಅಂಕಪಟ್ಟಿಯನ್ನು ವೀಕ್ಷಿಸಬಹುದು.

ಫಲಿತಾಂಶದ ಬಳಿಕ ಮರುಮೌಲ್ಯಮಾಪನಕ್ಕೆ ಅವಕಾಶವಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಏಪ್ರಿಲ್ 25 ರಿಂದ ಮೇ ಮೊದಲ ವಾರದವರೆಗೆ ಪೂರಕ ಪರೀಕ್ಷೆ ನಡೆಸಲು ಮಂಡಳಿ ಸಿದ್ಧತೆ ನಡೆಸಿದೆ. ಈ ಬಾರಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಮಂಡಳಿಯು ಫಲಿತಾಂಶ ಪ್ರಕಟಣೆಗೆ ಸಕಲ ವ್ಯವಸ್ಥೆಗಳನ್ನು ಪೂರ್ಣಗೊಳಿಸಿದೆ.







Comments