;
top of page

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಪರಿಚಲನೆ:ಕರಾವಳಿ, ಮಲೆನಾಡಿಗೆ ಹವಾಮಾನ ಇಲಾಖೆ ಅಲರ್ಟ್

Oct 5
1 min read

ಅರಬ್ಬಿ ಸಮುದ್ರದ ಮೇಲೆ ರೂಪುಗೊಂಡಿರುವ ಮೇಲ್ಮೈ ಚಂಡಮಾರುತದ ಪರಿಚಲನೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ. ಇದರ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡಿನಲ್ಲಿ ಅಕ್ಟೋಬರ್ 11ರವರೆಗೆ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿಯೂ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಮಲೆನಾಡು ಪ್ರದೇಶಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಸಕಲೇಶಪುರ ಭಾಗಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಉತ್ತಮ ಮಳೆಯಾಗಲಿದೆ. ಈ ಭಾಗಗಳಲ್ಲಿ ಅಕ್ಟೋಬರ್ 10 ಅಥವಾ 11ರವರೆಗೆ ಮಳೆಯ ತೀವ್ರತೆ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಅಕ್ಟೋಬರ್ 6ರವರೆಗೆ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.


ಇನ್ನೊಂದೆಡೆ, ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳ ಕಾಲ ಒಣಹವೆ ಹಾಗೂ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪರಿಣಾಮದಿಂದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮಳೆ ಬಾಧಿತ ಪ್ರದೇಶದ ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page