ಅಕ್ರಮ ಬಂಧನ: ಉತ್ತರ ಪ್ರದೇಶ ಸರ್ಕಾರಕ್ಕೆ ಹೈಕೋರ್ಟ್ ಚಾಟಿ, 10 ಲಕ್ಷ ದಂಡ
- May 2
- 1 min read

ಯಾವುದೇ ಕಾರಣ ನೀಡದೆ ವ್ಯಕ್ತಿಯೋರ್ವನನ್ನು ಮೂರು ತಿಂಗಳ ಕಾಲ ಅಕ್ರಮವಾಗಿ ಜೈಲಿನಲ್ಲಿರಿಸಿದ್ದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ತೀವ್ರವಾಗಿ ಖಂಡಿಸಿದೆ. ಈ ಪ್ರಕರಣವನ್ನು ಸಂವಿಧಾನಬಾಹಿರ ಎಂದು ಘೋಷಿಸಿದ ನ್ಯಾಯಾಲಯ, ಸಂತ್ರಸ್ತರಿಗೆ 10 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ. ಅಧಿಕಾರಿಗಳ ಈ ವರ್ತನೆಯನ್ನು ನ್ಯಾಯಪೀಠವು ಗಂಭೀರವಾಗಿ ಪರಿಗಣಿಸಿದ್ದು, ದಂಡದ ಮೊತ್ತವನ್ನು ಜವಾಬ್ದಾರಿಯುತ ಅಧಿಕಾರಿಗಳಿಂದಲೇ ವಸೂಲಿ ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಮನೋಜ್ ಕುಮಾರ್ ಎಂಬುವವರನ್ನು ಪೊಲೀಸರು ಯಾವುದೇ ಆರೋಪಗಳಿಲ್ಲದೆ ಬಂಧಿಸಿದ್ದರು. ಇದು ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬಂಧನದ ಸಂದರ್ಭದಲ್ಲಿ ಲಿಖಿತ ಆಧಾರಗಳನ್ನು ಒದಗಿಸುವುದು ಸಾಂವಿಧಾನಿಕ ಬಾಧ್ಯತೆಯಾಗಿದೆ ಎಂದು ನ್ಯಾಯಮೂರ್ತಿಗಳು ಎಚ್ಚರಿಸಿದ್ದಾರೆ. ಹಿರಿಯ ಅಧಿಕಾರಿಗಳೇ ಈ ರೀತಿ ವರ್ತಿಸಿದರೆ, ಇನ್ನುಳಿದ ಅಧಿಕಾರಿಗಳು ಹೇಗೆ ಕಾರ್ಯನಿರ್ವಹಿಸುತ್ತಿರಬಹುದು ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ.







Comments