ಅಶೋಕ್ ಕುಮಾರ್ ರೈ ಸಚಿವ ಸಂಪುಟ ಸೇರ್ಪಡೆ ಬಹುತೇಕ ಖಚಿತ: ಕರಾವಳಿ ಬಲವರ್ಧನೆಗೆ ಡಿಕೆಶಿ ಮಾಸ್ಟರ್ ಪ್ಲಾನ್!

ರಾಜ್ಯ ರಾಜಕೀಯದಲ್ಲಿ ಭಾರಿ ಆಡಳಿತಾತ್ಮಕ ಬದಲಾವಣೆಗಳು ಪ್ರಕ್ರಿಯೆಗೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿ ಅವರ ಸೂಚನೆಗೆ ಗೌರವ ನೀಡಿ, ತಾವು ನುಡಿದಂತೆ ಸಿದ್ದರಾಮಯ್ಯ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ.
ಈ ನಾಯಕತ್ವ ಬದಲಾವಣೆ ಪ್ರಕ್ರಿಯೆ ನಡುವೆ ರಾಜ್ಯ ಸಚಿವ ಸಂಪುಟ ಪುನಾರಚನೆಯ ಭಾರಿ ಕಸರತ್ತು ಮತ್ತು ಲಾಬಿಗಳು ಶುರುವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ವಿಶೇಷ ಹಿಡಿತ ಹಾಗೂ ಪ್ರೀತಿ ಹೊಂದಿರುವ ಡಿ.ಕೆ. ಶಿವಕುಮಾರ್ ಅವರು, ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಸದ್ಯ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಶಾಸಕರಿದ್ದು, ಯು.ಟಿ. ಖಾದರ್ ಅವರಿಗೆ ಈಗಾಗಲೇ ಸಭಾಪತಿ ಸ್ಥಾನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಭಾವಿ ನಾಯಕರಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಹೊಸ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಇದು ಕರಾವಳಿಯಲ್ಲಿ ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ.







Comments