;
top of page

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಗರ್ಭಿಣಿಯಾದ ಪ್ರಕರಣದಲ್ಲಿ ಆಟೋ ಚಾಲಕ ಬಂಧನ

Jul 21
1 min read

ಬೆಳ್ತಂಗಡಿ, ಜು. 21: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದಡಿ ಆಟೋ ರಿಕ್ಷಾ ಚಾಲಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ಮೂಲದ ಶುಭರಾಜ್ (28) ಎಂದು ಗುರುತಿಸಲಾಗಿದೆ.

ಆರೋಪಿಯು ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಿಚಯ ಬೆಳೆಸಿ, ಆಕೆಯನ್ನು ಪುಸಲಾಯಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದನೆಂಬ ಆರೋಪವೂ ಕೇಳಿಬಂದಿದೆ.

ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯ ತಾಯಿ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಿಸಿದ್ದು, ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ. ಬಳಿಕ ತಾಯಿ ವಿಚಾರಿಸಿದಾಗ ಆರೋಪಿಯ ಕೃತ್ಯ ಬೆಳಕಿಗೆ ಬಂದಿದೆ.

ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಜುಲೈ 18ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಜುಲೈ 19ರಂದು ಆರೋಪಿ ಶುಭರಾಜ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರು.

ಬಳಿಕ ಆರೋಪಿಯನ್ನು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page