;
top of page

ಬಿ.ಸಿ.ರೋಡ್‌ನಲ್ಲಿ ಭೀಕರ ಅಪಘಾತ: ಟಿಪ್ಪರ್‌ ಡಿಕ್ಕಿಯಾಗಿ ಸ್ಕೂಟರ್‌ ಸಹಸವಾರ ಸಾವು, ಸವಾರನಿಗೆ ತೀವ್ರ ಗಾಯ

Aug 7
1 min read

ಬಂಟ್ವಾಳದ ಬಿ.ಸಿ.ರೋಡ್‌ನ ಎನ್‌.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್‌ ಸಹಸವಾರ ಯಶ್ವಂತ್ ಕುಲಾಲ್ ಮೃತಪಟ್ಟಿದ್ದು, ಸವಾರ ದಯಾನಂದ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಲ್ಲಡ್ಕ ಕಡೆಯಿಂದ ಲೊರೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಧಾವಿಸಿ ಬಂದ ಟಿಪ್ಪರ್ ಲಾರಿಯು, ಮಂಗಳೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಸ್ಕೂಟರ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್‌ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದರು.

ಗಾಯಾಳುಗಳನ್ನು ತಕ್ಷಣವೇ ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಯಶ್ವಂತ್‌ ಕೊನೆಯುಸಿರೆಳೆದಿದ್ದಾರೆ. ದಯಾನಂದ ಅವರು ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಚಾಲಕ ಸಲ್ಮಾನ್ ಫಾರುಕ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page