ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ, ವಿಷ ಸೇವನೆ ಶಂಕೆ

ಬಂಟ್ವಾಳದ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಆರೋಪಿ ಚೇತನ್‌ನನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮೂಡಿಸಿದ್ದ ಈ ಘಟನೆ ನಡೆದ 24 ಗಂಟೆಗಳ ಒಳಗಾಗಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಪೊಲೀಸರ ಕೈಗೆ ಸಿಕ್ಕಿಬೀಳುವ ಭೀತಿಯಿಂದ ಆರೋಪಿಯು ಇಲಿಪಾಷಾಣ (ವಿಷ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ತುರ್ತು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.
ಪ್ರಸ್ತುತ ಆರೋಪಿಯ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ತೀವ್ರ ನಿಗಾವಹಿಸಿ ಪರಿಶೀಲನೆ ನಡೆಸುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.







Comments