;
top of page

ಬಳ್ಳಾರಿಯಲ್ಲಿ ಬ್ಯಾನರ್ ಸಮರಕ್ಕೆ ಕಾಂಗ್ರೆಸ್ ಕಾರ್ಯಕರ್ತ ಬಲಿ: ಜನಾರ್ದನ ರೆಡ್ಡಿ, ಶ್ರೀರಾಮುಲು ವಿರುದ್ಧ ಎಫ್‌ಐಆರ್

  • Writer: sathyapathanewsplu
    sathyapathanewsplu
  • Jan 2
  • 1 min read

ಬಳ್ಳಾರಿ: ನಗರದ ಹವಂಬಾವಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಭೀಕರ ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿ (A1), ಸೋಮಶೇಖರ ರೆಡ್ಡಿ (A2), ಶ್ರೀರಾಮುಲು (A3) ಮತ್ತು ಪಾಲಿಕೆ ವಿರೋಧ ಪಕ್ಷದ ನಾಯಕ ಮೋತ್ಕರ್ ಶ್ರೀನಿವಾಸ್ ಸೇರಿದಂತೆ ಒಟ್ಟು 11 ಜನರ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಚಾನಾಳ್ ಶೇಖರ್ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.



ಜನೆವರಿ 3ರಂದು ನಿಗದಿಯಾಗಿದ್ದ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ಅವರ ನಿವಾಸದ ಮುಂಭಾಗ ಬ್ಯಾನರ್ ಅಳವಡಿಸಲು ಮುಂದಾಗಿದ್ದರು. ಇದಕ್ಕೆ ರೆಡ್ಡಿ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದಾಗ ಉಭಯ ಬಣಗಳ ನಡುವೆ ಮಾತಿನ ಚಕಮಕಿ ಆರಂಭವಾಗಿತ್ತು. ಈ ಜಗಳ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವುದು ನಗರದಲ್ಲಿ ಆತಂಕ ಸೃಷ್ಟಿಸಿದೆ.

ಘಟನೆಯಿಂದಾಗಿ ಬಳ್ಳಾರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಂಬಾವಿ ಪ್ರದೇಶದಲ್ಲಿ 144ನೇ ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜನಾರ್ದನ ರೆಡ್ಡಿ ಅವರ ನಿವಾಸದ ಸುತ್ತಮುತ್ತ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ರಾಜಕೀಯ ಬಣಗಳ ನಡುವಿನ ಈ ಸಂಘರ್ಷ ಈಗ ಕೊಲೆ ಪ್ರಕರಣವಾಗಿ ಬದಲಾಗಿದ್ದು, ಜಿಲ್ಲೆಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page