;
top of page

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣ: ಸಾರ್ವಜನಿಕರಲ್ಲಿ ಆತಂಕ!

  • May 27
  • 1 min read

ರಾಜ್ಯದ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಮತ್ತು ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸಿರುವುದು ಪತ್ತೆಯಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಇದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.

ಅಧಿಕಾರಿಗಳು ರಾಜ್ಯಾದ್ಯಂತ ಸಂಗ್ರಹಿಸಿದ್ದ ಸುಮಾರು 35,639 ಆಹಾರದ ಮಾದರಿಗಳ ಪ್ರಯೋಗಾಲಯದ ವರದಿಯಲ್ಲಿ ಈ ಆಘಾತಕಾರಿ ಅಂಶ ದೃಢಪಟ್ಟಿದೆ. ಆಕರ್ಷಣೆಗಾಗಿ ನಿಷೇಧಿತ ಬಣ್ಣಗಳನ್ನು ಮಿಶ್ರಣ ಮಾಡಲಾಗುತ್ತಿದ್ದು, ಇವು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ ಎಂದು ಲ್ಯಾಬ್ ವರದಿ ತಿಳಿಸಿದೆ.

ಚಿಕ್ಕ ಮಕ್ಕಳಿಂದ ವೃದ್ಧರವರೆಗೆ ಎಲ್ಲರ ಆರೋಗ್ಯ ಕೆಡಿಸುತ್ತಿರುವ ಇಂತಹ ಬೇಜವಾಬ್ದಾರಿ ಬೇಕರಿ ಮಾಲೀಕರು ಮತ್ತು ತಯಾರಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರ ಪರವಾನಗಿ ರದ್ದುಪಡಿಸಬೇಕು ಎಂದು ಸಾರ್ವಜನಿಕರು ಈಗ ಸರ್ಕಾರದ ಬಳಿ ಒತ್ತಾಯಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page