;
top of page

ಬಳ್ಪ -ಕೋಡಿಂಬಾಳ: ಜನವಸತಿ ಪ್ರದೇಶಕ್ಕೆ ಲಗ್ಗೆಯಿಟ್ಟ ಕಾಡಾನೆಗಳ ಹಿಂಡು; ಗ್ರಾಮಸ್ಥರಲ್ಲಿ ಆತಂಕ

Aug 28
1 min read

ಕೋಡಿಂಬಾಳ: ಬಳ್ಪ ಪರಿಸರದಲ್ಲಿ ಸಂಚರಿಸುತ್ತಿದ್ದ ಕಾಡಾನೆಗಳ ಹಿಂಡು ಇದೀಗ ಪಕ್ಕದ ಕೋಡಿಂಬಾಳ ಗ್ರಾಮಕ್ಕೆ ಲಗ್ಗೆಯಿಟ್ಟಿದೆ. ಎಣ್ಣೆಮಜಲು ಬಳಿಯ ಬೀರಿಕಾಡು ಪ್ರದೇಶದ ಮೂಲಕ ನದಿ ದಾಟಿ ಬಂದಿರುವ ಆನೆಗಳು, ಕೊರಿಯರ್ ಸಮೀಪದ ಖಾಸಗಿ ರಬ್ಬರ್ ತೋಟದಲ್ಲಿ ಠಿಕಾಣಿ ಹೂಡಿವೆ.

ಜನವಸತಿ ಹಾಗೂ ಕೃಷಿ ತೋಟಗಳ ಸನಿಹದಲ್ಲೇ ಆನೆಗಳು ಬೀಡುಬಿಟ್ಟಿರುವುದರಿಂದ ಸ್ಥಳೀಯ ಕೃಷಿಕರು, ಕಾರ್ಮಿಕರು ಮತ್ತು ಶಾಲಾ ಮಕ್ಕಳು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಗ್ರಾಮಸ್ಥರು ಒಂಟಿಯಾಗಿ ಸಂಚರಿಸದೆ ಜಾಗರೂಕರಾಗಿರುವಂತೆ ಎಚ್ಚರಿಕೆ ಸಂದೇಶ ರವಾನಿಸಲಾಗುತ್ತಿದೆ.

ಅರಣ್ಯ ಇಲಾಖಾಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಕಾಡಾನೆಗಳನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಹಿಮ್ಮೆಟ್ಟಿಸಲು ಸೂಕ್ತ ಕಾರ್ಯಾಚರಣೆ ನಡೆಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page