;
top of page

ಬೆಂಗಳೂರು: ಹಲವೆಡೆ ಆರೋಗ್ಯ ಅಧಿಕಾರಿಗಳ ಹಠಾತ್ ದಾಳಿ: ಅವಧಿ ಮೀರಿದ ಆಹಾರ ವಸ್ತುಗಳು ವಶ

6 days ago
1 min read

ಬೆಂಗಳೂರು ನಗರದ ವಿವಿಧೆಡೆ ಆಹಾರ ಮತ್ತು ದಿನಬಳಕೆಯ ವಸ್ತುಗಳನ್ನು ಮಾರಾಟ ಮಾಡುವ ಸೂಪರ್ ಮಾರ್ಕೆಟ್‌ಗಳು ಹಾಗೂ ಮಳಿಗೆಗಳ ಮೇಲೆ ಆರೋಗ್ಯ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ.

ಲಿಂಗರಾಜಪುರಂನಲ್ಲಿರುವ ಲಿಯೋ ಮಾರ್ಟ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ತಪಾಸಣೆ ನಡೆಸಿದ ಅಧಿಕಾರಿಗಳು, ಸೇವನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಅಪಾರ ಪ್ರಮಾಣದ ಆಹಾರ ಪದಾರ್ಥಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಈ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆಯು, ನಿಯಮ ಮೀರಿ ನಡೆದುಕೊಂಡ ಅಂಗಡಿಗಳು ಮತ್ತು ಕಂಪನಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಯಾವುದೇ ರಾಜಿಯಿಲ್ಲ ಎಂದು ಸ್ಪಷ್ಟಪಡಿಸಿರುವ ಆರೋಗ್ಯ ಸಚಿವ ಯು.ಟಿ. ಖಾದರ್, ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಮಳಿಗೆಗಳ ವಿರುದ್ಧ ಮುಂದಿನ ದಿನಗಳಲ್ಲೂ ಇಂತಹ ದಿಢೀರ್ ತಪಾಸಣೆ ಹಾಗೂ ಸೂಕ್ತ ಕ್ರಮಗಳು ಮುಂದುವರಿಯಲಿವೆ ಎಂದು ಎಚ್ಚರಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page