ಬ್ಯಾಂಕ್ ಮುಷ್ಕರ ರದ್ದು; ಎಂದಿನಂತೆ ಕಾರ್ಯನಿರ್ವಹಿಸಲಿವೆ ಬ್ಯಾಂಕ್‌ಗಳು

ನವದೆಹಲಿ: ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆಪ್ಟೆಂಬರ್ 28ರಿಂದ 30ರವರೆಗೆ ಕರೆ ನೀಡಿದ್ದ ಮೂರು ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು ರದ್ದುಗೊಳಿಸಿದೆ. ಒಕ್ಕೂಟಗಳು ದಿಢೀರ್ ಈ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ವಾರಾಂತ್ಯದ ರಜೆಗಳೊಂದಿಗೆ ಸತತ ಮೂರು ದಿನಗಳ ಮುಷ್ಕರ ನಡೆದರೆ ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆಗಳಲ್ಲಿ ನಿರಂತರ ವ್ಯತ್ಯಯ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27ರ ಭಾನುವಾರದಂದು ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು (RRB) ಸಹ ಕಾರ್ಯನಿರ್ವಹಿಸಿದ್ದವು.
ವಾರದಲ್ಲಿ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿ, ಪಿಂಚಣಿ ಪರಿಷ್ಕರಣೆ, ಎಲ್ಲಾ ಪಿಂಚಣಿದಾರರಿಗೆ ಸಮಾನ ತುಟ್ಟಿಭತ್ಯೆ (DA) ಸೂತ್ರ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಬದಲಿಗೆ ಹಳೆಯ ಪಿಂಚಣಿ ಯೋಜನೆ (OPS) ಆಯ್ಕೆ ಮಾಡಲು ಅವಕಾಶ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ಯೂನಿಯನ್‌ಗಳು ಮುಷ್ಕರಕ್ಕೆ ಕರೆ ನೀಡಿದ್ದವು.
ಮುಷ್ಕರ ರದ್ದಾಗಿರುವುದರಿಂದ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಲಭ್ಯವಾಗಲಿವೆ.







Comments