;
top of page

ಆಟವಾಡುತ್ತಿದ್ದಾಗ ಕುತ್ತಿಗೆಗೆ ಸಿಲುಕಿದ ಹಗ್ಗ; 9 ವರ್ಷದ ಬಾಲಕ ದಾರುಣ ಸಾವು

4 days ago
1 min read

ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪದ ಕೇಂತಲೆ ಮನೆಯಲ್ಲಿ ನಡೆದ ದುರ್ಘಟನೆಯೊಂದರಲ್ಲಿ 9 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.

ಕೇಂತಲೆ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಮೃತಪಟ್ಟ ಬಾಲಕ. ಅ.25ರ ರಾತ್ರಿ ಮನೆಯ ಎದುರಿನ ಹಾಲ್‌ನಲ್ಲಿ ಅಮೃತ್ ಒಬ್ಬನೇ ಆಟವಾಡುತ್ತಿದ್ದ ಎನ್ನಲಾಗಿದೆ.

ಈ ವೇಳೆ ಕಿಟಕಿಯಲ್ಲಿ ಮೊದಲೇ ಸಿಕ್ಕಿಸಲಾಗಿದ್ದ ಹಗ್ಗವೊಂದು ಆಕಸ್ಮಿಕವಾಗಿ ಬಾಲಕನ ಕುತ್ತಿಗೆಗೆ ಸಿಲುಕಿಕೊಂಡಿದೆ. ಪರಿಣಾಮ ಉಸಿರುಗಟ್ಟಿ ಬಾಲಕ ಅಸ್ವಸ್ಥಗೊಂಡಿದ್ದಾನೆ.

ಅಮೃತ್ ಮಾತನಾಡದೆ ಇರುವುದನ್ನು ಗಮನಿಸಿದ ಆತನ ಸಹೋದರಿ ಪ್ರಾರ್ಥನಾ, ಆತಂಕದಿಂದ ಜೋರಾಗಿ ಕೂಗುತ್ತಾ ಸಮೀಪದಲ್ಲಿದ್ದ ಚಿಕ್ಕಪ್ಪನ ಮನೆಗೆ ಓಡಿ ವಿಷಯ ತಿಳಿಸಿದ್ದಾಳೆ. ಬಳಿಕ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದಾಗ, ಬಾಲಕನ ತಾಯಿ ಗೀತಾ ಅವರು ಅಮೃತ್‌ನನ್ನು ತೊಡೆಯ ಮೇಲೆ ಮಲಗಿಸಿಕೊಂಡು ಅಳುತ್ತಿದ್ದರು ಎನ್ನಲಾಗಿದೆ.

ತಕ್ಷಣ ಬಾಲಕನಿಗೆ ಉಪಚಾರ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 27/2026ರಂತೆ ಬಿಎನ್‌ಎಸ್‌ಎಸ್ ಕಲಂ 194ರಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page