ಬಂಟ್ವಾಳದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹4.90 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಗಾಂಜಾ, ಕಾರು–ಮೊಬೈಲ್‌ಗಳು ವಶ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಹಾಗೂ ಗಾಂಜಾ ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಗಸ್ಟ್ 12ರಂದು ಬಂಟ್ವಾಳ ಕಾವಳಪಡೂರು ವ್ಯಾಪ್ತಿಯಲ್ಲಿ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ದಾಳಿಯ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂ.ಡಿ.ಎಂ.ಎ, 30.34 ಗ್ರಾಂ ಗಾಂಜಾ, ಮಾದಕ ವಸ್ತುಗಳ ಸಾಗಾಟಕ್ಕೆ ಬಳಸಲಾಗುತ್ತಿದ್ದ ಕಾರು ಹಾಗೂ ಐದು ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಯಾರ್, ಮಂಗಳೂರಿನ ನಾಶೀರ್ ಹುಸೇನ್, ಗೋಳ್ತಮಜಲಿನ ಮಹಮ್ಮದ್ ಜುನೈದ್ ಹಾಗೂ ಕಂಕನಾಡಿಯ ಮೊಹಮ್ಮದ್ ಅಫ್ರೀದಿ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ., ಪಿಎಸ್‌ಐ ರನ್ನ ಗೌಡ ಎಸ್. ಪಾಟೀಲ್, ಪ್ರೊಬೇಷನರಿ ಪಿಎಸ್‌ಐಗಳಾದ ಶಿವರಾಮ್ ಹಾಗೂ ಫಕೀರಪ್ಪ ಸೇರಿದಂತೆ ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು.







Comments