;
top of page

ಬಂಟ್ವಾಳದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಮೂವರಿಗೆ ಗಾಯ

Jul 22
1 min read



ಮಂಗಳೂರು, ಜುಲೈ 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಬುಧವಾರ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಓರ್ವ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.


ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ ಬಸ್‌ನ ಮೇಲ್ಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಒಳಗಿದ್ದ ವಿದ್ಯಾರ್ಥಿಗಳಲ್ಲಿ ಹಲವರಿಗೆ ಗಾಯಗಳಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ವೇಳೆ ಬಸ್‌ನಲ್ಲಿ ಒಟ್ಟು 32 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಮಾರ್ಗ ಮಧ್ಯೆ ಕೆಲವರನ್ನು ಇಳಿಸಲಾಗಿದ್ದರಿಂದ ಅಪಘಾತ ಸಂಭವಿಸಿದ ಸಮಯದಲ್ಲಿ ಸುಮಾರು 25 ಮಂದಿ ವಿದ್ಯಾರ್ಥಿಗಳು ಬಸ್‌ನಲ್ಲಿ ಇದ್ದರೆಂದು ಅಂದಾಜಿಸಲಾಗಿದೆ.


ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿ ಗಾಯಾಳು ವಿದ್ಯಾರ್ಥಿಗಳನ್ನು ರಕ್ಷಿಸಿದರು. ಬಳಿಕ ಅವರನ್ನು ಮಂಗಳೂರು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.


ಘಟನಾ ಸ್ಥಳಕ್ಕೆ ಸಂಬಂಧಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣ ಹಾಗೂ ಗಾಯಾಳುಗಳ ಆರೋಗ್ಯ ಸ್ಥಿತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಘಟನೆಯು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page