;
top of page

ಬಂಟ್ವಾಳ: ಹೆಜ್ಜೇನು ದಾಳಿಗೆ ವೃದ್ಧೆ ಬಲಿ

Sep 25
1 min read

ಬಂಟ್ವಾಳ: ಇಲ್ಲಿನ ಕಸಬಾ ಗ್ರಾಮದ ಕೆಮ್ಮಟ್ಟೆ ಗುಡ್ಡೆಯಲ್ಲಿ ಹೆಜ್ಜೇನು ದಾಳಿಗೆ ಒಳಗಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಕೆಮ್ಮಟ್ಟೆ ಗುಡ್ಡೆ ನಿವಾಸಿ ಕಮಲಾ (74) ಮೃತಪಟ್ಟ ದುರದೃಷ್ಟಕರ ಮಹಿಳೆ.

ಸೆಪ್ಟೆಂಬರ್ 23ರಂದು ಬೆಳಿಗ್ಗೆ ಕಮಲಾ ಅವರು ಮನೆಯ ಬಳಿಯ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ದಿಢೀರನೆ ದಾಳಿ ಮಾಡಿದ ಹೆಜ್ಜೇನುಗಳು ಅವರ ಮುಖ, ಬೆನ್ನು ಹಾಗೂ ಕಾಲುಗಳಿಗೆ ತೀವ್ರವಾಗಿ ಕಚ್ಚಿದ್ದವು. ಮನೆಗೆ ಬಂದ ಅವರು ಘಟನೆಯನ್ನು ಮಗ ದಿನೇಶ್ ಅವರಿಗೆ ತಿಳಿಸಿದ್ದರು. ಕೂಡಲೇ ಅವರನ್ನು ಖಾಸಗಿ ಕ್ಲಿನಿಕ್‌ಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಗಿತ್ತು.

ಆದರೆ ಮಧ್ಯಾಹ್ನದ ವೇಳೆಗೆ ಕಮಲಾ ಅವರ ಆರೋಗ್ಯ ಸ್ಥಿತಿ ಏಕಾಏಕಿ ಕ್ಷೀಣಿಸಿ, ಮಾತನಾಡಲಾಗದೆ ಅಸ್ವಸ್ಥರಾದರು. ತಕ್ಷಣವೇ ಅವರನ್ನು ಅಂಬುಲೆನ್ಸ್ ಮೂಲಕ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page