ಬಿಸಿ ರೋಡ್‌ನಲ್ಲಿ ಯುವತಿಯ ಭೀಕರ ಕೊಲೆ: ಏಕಪಕ್ಷೀಯ ಪ್ರೀತಿಗೆ ಯುವತಿ ಬಲಿ!!
- 2 hours ago
- 1 min read

ಬಂಟ್ವಾಳದ ಬಿಸಿ ರೋಡ್‌ನ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಭೀಕರ ಘಟನೆಯೊಂದು ನಡೆದಿದೆ. ಬಸ್‌ಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ.
ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಗೌಡ (21) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಕೃತ್ಯ ಎಸಗಿದ ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಈತ ಯುವತಿಯ ದೂರದ ಸಂಬಂಧಿಯಾಗಿದ್ದಾನೆ. ಆರೋಪಿಯು ಲಾವಣ್ಯಳನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಇದೇ ದ್ವೇಷದಿಂದ ಈ ಭೀಕರ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ರಕ್ತಸಿಕ್ತ ದಾಳಿಯಿಂದ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿ ಚೇತನ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.







Comments