ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಚಿಕಿತ್ಸೆ ಬಳಿಕ ಆರೋಪಿ ಚೇತನ್ ಪೊಲೀಸ್ ಕಸ್ಟಡಿಗೆ

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಪ್ರಕರಣದ ಪ್ರಮುಖ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಜುಲೈ 16ರಂದು ಈ ಭೀಕರ ಕೃತ್ಯ ಎಸಗಿದ ಬಳಿಕ ಕಾರಿನಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಲಾಗಿತ್ತು.

ಬಂಧನದ ವೇಳೆ ಇಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ 11 ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆತನ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ, ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಆರೋಗ್ಯ ಸ್ಥಿರಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಎಎಸ್‌ಪಿ ಯಶ್ ಕುಮಾರ್ ಶರ್ಮಾ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಅನಂತಪದ್ಮನಾಭ ತನಿಖೆ ನಡೆಸುತ್ತಿದ್ದಾರೆ.







Comments