ಬೀದರ್ ಬ್ರಿಮ್ಸ್ ಶವಾಗಾರದಲ್ಲಿ ಮೃತ ಮಹಿಳೆಯರ ಬೆತ್ತಲೆ ಚಿತ್ರೀಕರಣ, ಆರೋಪಿ ಬಂಧನ*

ಬೀದರ್‌ನ ಪ್ರಮುಖ ಸರ್ಕಾರಿ ಆಸ್ಪತ್ರೆಯಾದ ಬ್ರಿಮ್ಸ್ (BRIMS) ಶವಾಗಾರದಲ್ಲಿ ಮೃತ ಮಹಿಳೆಯರ ಶವಗಳ ಬೆತ್ತಲೆ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ.
ಶವಾಗಾರದ ಅಟೆಂಡರ್ ಮುನೀರ್ ಅಹ್ಮದ್ ಎಂಬಾತ ಮರಣೋತ್ತರ ಪರೀಕ್ಷೆಯ ವೇಳೆ ಅನುಮತಿ ಇಲ್ಲದೆ, ಮೃತರ ಮೇಲಿದ್ದ ಬಟ್ಟೆಗಳನ್ನು ತೆಗೆದು ವಿಕೃತವಾಗಿ ಫೋಟೋ ಕ್ಲಿಕ್ಕಿಸಿ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಶವಾಗಾರದ ಮುಖ್ಯಸ್ಥ ಡಾ. ಮೋಸಿನ್ ಉಲ್ ಹಕ್ ಅವರು ಬೀದರ್ ನ್ಯೂ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.







Comments