;
top of page

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ

Aug 27
1 min read

ಬೆಳಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳಂದೂರು ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ, ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀ ರಾಘವ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮನಾಭ ಕೆ., ಪ್ರಾಂಶುಪಾಲರು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಹಾಗೂ ಶ್ರೀ ವಚನ ಜಯರಾಮ್, ಅಧ್ಯಕ್ಷರು ವಿದ್ಯಾಭಿಮಾನಿಗಳ ಸಂಘ ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ವೇಣುಗೋಪಾಲ ಕಳುವಾಜೆ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಇದೇ ಸಂದರ್ಭದಲ್ಲಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. 2023–26ನೇ ಶೈಕ್ಷಣಿಕ ಸಾಲಿನ ಅಂತಿಮ ಪದವಿ ವಿದ್ಯಾರ್ಥಿಗಳಲ್ಲಿ ಉತ್ತಮ ಸಾಧನೆ ಮಾಡಿದ ಹಾಗೂ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಅತಿಥಿಗಳು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಶೈಕ್ಷಣಿಕ ಸಾಧನೆಯೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು. ವಿದ್ಯಾರ್ಥಿಗಳು ಉತ್ತಮ ಗುರಿಯನ್ನು ಹೊಂದಿ, ನಿರಂತರ ಪರಿಶ್ರಮ ಹಾಗೂ ಶಿಸ್ತಿನ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು ಎಂದು ಹಿತನುಡಿದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಕಾಲೇಜಿನ ಉಪನ್ಯಾಸಕರು, ಕಚೇರಿ ಸಿಬ್ಬಂದಿ, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವುದರ ಜೊತೆಗೆ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ, ಆತ್ಮವಿಶ್ವಾಸ ಹಾಗೂ ಸಾಧನೆಯ ಮನೋಭಾವವನ್ನು ಮೂಡಿಸಿದ ಕಾರ್ಯಕ್ರಮವು ಯಶಸ್ವಿಯಾಗಿ ಕೊನೆಗೊಂಡಿತು.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page