;
top of page

ಬೆಳ್ಳಾರೆ ಎಂಡೋ ಪಾಲನಾ ಕೇಂದ್ರಕ್ಕೆ ರೋಟರಿ ಕ್ಲಬ್‌ನಿಂದ ನೀರಿನ ಟಾಂಕಿ ಕೊಡುಗೆ

7 hours ago
1 min read

ಬೆಳ್ಳಾರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಹಾಗೂ ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ನಡೆಯುತ್ತಿರುವ ಬೆಳ್ಳಾರೆ ಎಂಡೋ ಸಂತೃಪ್ತರ ಪಾಲನಾ ಕೇಂದ್ರಕ್ಕೆ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ನೀರಿನ ಟಾಂಕಿಯನ್ನು ಕೊಡುಗೆಯಾಗಿ ನೀಡಲಾಯಿತು.

ಸೆ.17ರಂದು ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷ ಆರೀಫ್ ಬಿ.ಎಂ. ಮಾತನಾಡಿ, ರೋಟರಿ ಸಂಸ್ಥೆ ನಿರಂತರವಾಗಿ ವಿವಿಧ ಸಮಾಜಮುಖಿ ಕಾರ್ಯಗಳ ಮೂಲಕ ಜನರೊಂದಿಗೆ ಸ್ಪಂದಿಸುತ್ತಿದೆ. ಕೊಡುಗೆಯಾಗಿ ನೀಡಿರುವ ನೀರಿನ ಟಾಂಕಿಯನ್ನು ಪಾಲನಾ ಕೇಂದ್ರದವರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಾರೈಸಿದರು.

ರೊ. ವಿನಯ ಭಾರದ್ವಾಜ್ ರೋಟರಿ ಸಂಸ್ಥೆಯ ಸಮಾಜಮುಖಿ ಚಟುವಟಿಕೆಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಟಾಂಕಿಯ ದಾನಿಗಳಾದ ಅಬೂಬಕ್ಕರ್ ಮಂಗಳ, ಉದ್ಯಮಿ ಆದಂ ನೆಟ್ಟಾರು, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಬೆಳ್ಳಾರೆ ಪೊಲೀಸ್ ಠಾಣೆಯ ಎಎಸ್‌ಐ ಕುಂಞ, ರೊ. ವಿಠಲದಾಸ್ ಎನ್.ಎಸ್.ಡಿ ಹಾಗೂ ರೋಟರಿ ಕ್ಲಬ್ ಕಾರ್ಯದರ್ಶಿ ಪ್ರಶಾಂತ ತಂಟೆಪ್ಪಾಡಿ ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಪದಾಧಿಕಾರಿಗಳು ಹಾಗೂ ಎಂಡೋ ಸಂತೃಪ್ತರ ಪಾಲನಾ ಕೇಂದ್ರದ ಸಿಬ್ಬಂದಿ ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page