;
top of page

ಬೆಳ್ಳಾರೆ–ಸವಣೂರು ರಸ್ತೆಯಲ್ಲಿ ಭೀಕರ ಅಪಘಾತ: ಸ್ಟೇ ವೈರ್‌ಗೆ ಬೈಕ್ ಡಿಕ್ಕಿ, ಕುದ್ಮಾರು ಯುವಕ ಸ್ಥಳದಲ್ಲೇ ಸಾವು!

Oct 21
1 min read

ಪುತ್ತೂರು: ಬೆಳ್ಳಾರೆ–ಸವಣೂರು ರಸ್ತೆಯ ಕನ್ನಡಕುಮೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಅಕ್ಟೋಬರ್ 20ರ ರಾತ್ರಿ ನಡೆದಿದೆ.


ಮೃತ ಯುವಕನನ್ನು ಕಡಬ ಕುದ್ಮಾರು ನಿವಾಸಿ ಧನಂಜಯ ಎಂದು ಗುರುತಿಸಲಾಗಿದೆ. ಧನಂಜಯ ತನ್ನ ಸ್ನೇಹಿತ ರೋಷನ್ ಅವರನ್ನು ಸಹಸವಾರನಾಗಿ ಕೂರಿಸಿಕೊಂಡು KA-19-HK-0323 ನೋಂದಣಿಯ ಬೈಕ್‌ನಲ್ಲಿ ಬೆಳ್ಳಾರೆ ಕಡೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಎನ್ನಲಾಗಿದೆ.


ಕನ್ನಡಕುಮೇರಿ ಬಳಿ ತಲುಪುತ್ತಿದ್ದಂತೆ ಬೈಕ್‌ನ ನಿಯಂತ್ರಣ ತಪ್ಪಿದ್ದು, ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಸ್ಟೇ ವೈರ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಧನಂಜಯ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಹಸವಾರ ರೋಷನ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.


ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.


ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 61/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 281, 125(ಎ) ಹಾಗೂ 106ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page