ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ, ಮಹಿಳೆ ಸಾವು

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ 17ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರನ್ನು ಬಳಂಜ ಗ್ರಾಮದ ನರ್ಸರಿ ಮಾಲೀಕ ಅನಿಲ್ ಭಟ್ ಅವರ ಪತ್ನಿ ಶೈಲಜಾ (35) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅನಿಲ್ ಭಟ್ (45) ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.







Comments