ಬೆಳ್ತಂಗಡಿ ಬಂದಾರು ಗ್ರಾಮದಲ್ಲಿ ಸ್ಫೋಟ: ಕ್ರಿಕೆಟ್ ಆಡುತ್ತಿದ್ದ 11 ವರ್ಷದ ಬಾಲಕ ಗಾಯ
- 4 days ago
- 1 min read

ಬೆಳ್ತಂಗಡಿ: ತಾಲ್ಲೂಕಿನ ಬಂದಾರು ಗ್ರಾಮದಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಚೆಂಡಿನಂತಹ ವಸ್ತುವೊಂದು ಸ್ಫೋಟಗೊಂಡು 11 ವರ್ಷದ ಬಾಲಕನೊಬ್ಬ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.
ಬಂದಾರು ಗ್ರಾಮದ ಬಲಿಪೆ ನಿವಾಸಿಗಳಾದ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಗಾಯಗೊಂಡ ಬಾಲಕ. ಅಂಗಳದಲ್ಲಿ ಇಬ್ಬರು ಮಕ್ಕಳು ಆಟವಾಡುತ್ತಿದ್ದಾಗ ಚೆಂಡಿನಂತಿದ್ದ ಒಂದು ಅನುಮಾನಾಸ್ಪದ ವಸ್ತು ಸಿಕ್ಕಿದ್ದು, ಅದನ್ನು ತೆಗೆದುಕೊಂಡು ಕ್ರಿಕೆಟ್ ಆಟವಾಡಲು ಬಳಸಿದ್ದರು. ಒಬ್ಬ ಬಾಲಕ ಬೌಲಿಂಗ್ ಮಾಡುತ್ತಿದ್ದ ವೇಳೆ ಅಭೀಶ್ ಬ್ಯಾಟ್‌ನಿಂದ ಬಾರಿಸಿದ ಕ್ಷಣದಲ್ಲಿ ಆ ವಸ್ತು ಸ್ಫೋಟಗೊಂಡಿದೆ.
ಸ್ಫೋಟದ ತೀವ್ರತೆಗೆ ಅಭೀಶ್ ಮೈಯಲ್ಲಿ ಅಲ್ಲಲ್ಲಿ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತು ಕಾಯ್ದೆ 1884ರ 9(B)(1)(b) ಹಾಗೂ 125(A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಗ್ರಾಮಸ್ಥರಲ್ಲಿ ಆತಂಕ ಮೂಡಿಸಿರುವ ಈ ಘಟನೆಗೆ ಸಂಬಂಧಿಸಿ ಸ್ಫೋಟಗೊಂಡ ವಸ್ತುವಿನ ಸ್ವರೂಪ ಏನು ಎಂಬುದರ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ






Comments