ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಮದುವೆ ನಿಗದಿಯಾಗಿದ್ದ ಯುವಕ ಸೇರಿ ಇಬ್ಬರ ಬಂಧನ
- Apr 19
- 1 min read

ಬೆಳ್ತಂಗಡಿ ಸಮೀಪದ ಎರ್ಮಾಯಿ ಫಾಲ್ಸ್ ಬಳಿಯ ಕಾಡಿನಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಡುರುದ್ಯಾವರದ ಸುಮಂತ್ (28) ಮತ್ತು ಗರ್ಡಾಡಿಯ ನವನೀತ್ (26) ಎಂದು ಗುರುತಿಸಲಾಗಿದೆ. ಏಪ್ರಿಲ್ 16ರಂದು ಬಾಲಕಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಈ ಕೃತ್ಯ ಎಸಗಲಾಗಿದ್ದು, ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಪೊಲೀಸರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಬಂಧಿತ ಆರೋಪಿಗಳ ಪೈಕಿ ಸುಮಂತ್ ಎಂಬಾತನಿಗೆ ಮೇ 10ರಂದು ಮದುವೆ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಘಟನೆಯು ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಾಲಕಿಗೆ ಸೂಕ್ತ ರಕ್ಷಣೆ ಮತ್ತು ನ್ಯಾಯ ಒದಗಿಸಲು ಪೊಲೀಸರು ಮುಂದಾಗಿದ್ದಾರೆ.







Comments