ಬೆಂಗಳೂರು ಕಂಬಳಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ
- Mar 11
- 1 min read

ಕರಾವಳಿಯ ಸಾಂಪ್ರದಾಯಿಕ ಕ್ರೀಡೆ 'ಕಂಬಳ'ವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೊರಗೆ ನಡೆಸುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ರಾಜ್ಯದ ಸಂಸ್ಕೃತಿಯನ್ನು ವಿವಿಧ ಭಾಗಗಳಲ್ಲಿ ಪ್ರದರ್ಶಿಸುವುದರಲ್ಲಿ ತಪ್ಪೇನಿದೆ ಎಂದು ನ್ಯಾಯಪೀಠವು ಈ ಸಂದರ್ಭದಲ್ಲಿ ಪ್ರಶ್ನಿಸಿದೆ.

ಬೆಂಗಳೂರಿನಲ್ಲಿ ಕಂಬಳ ನಡೆಸುವುದಕ್ಕೆ ಯಾವುದೇ ಸಾಂಪ್ರದಾಯಿಕ ಸಂಬಂಧವಿಲ್ಲ ಎಂಬ ವಾದವನ್ನು ತಳ್ಳಿಹಾಕಿದ ಕೋರ್ಟ್, ಕ್ರೀಡೆಯನ್ನು ಒಂದು ನಿರ್ದಿಷ್ಟ ಪ್ರದೇಶಕ್ಕೆ ಸೀಮಿತಗೊಳಿಸಲು ನಿರಾಕರಿಸಿತು. ಇದರಿಂದಾಗಿ ಬೆಂಗಳೂರಿನಲ್ಲಿ ಕಂಬಳ ಆಯೋಜಿಸಲು ಇದ್ದ ಅಡ್ಡಿಗಳು ನಿವಾರಣೆಯಾದಂತಾಗಿದೆ.







Comments