;
top of page

ಹೈಕಮಾಂಡ್ ಸೂಚಿಸಿದರೆ ಮತ್ತೆರಡು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

  • Mar 7
  • 1 min read

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ. "ಹೈಕಮಾಂಡ್ ಅವಕಾಶ ನೀಡಿದರೆ ಇನ್ನು ಎರಡು ಬಜೆಟ್ ಮಂಡಿಸಲು ಸಿದ್ಧನಿದ್ದೇನೆ. ಜನರ ಆಶೀರ್ವಾದ ಹಾಗೂ ಹೈಕಮಾಂಡ್ ತೀರ್ಮಾನವೇ ಅಂತಿಮ, ಯಾರೋ ನೀಡುವ ಹೇಳಿಕೆಗಳು ನನಗೆ ಮುಖ್ಯವಲ್ಲ" ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಸಾಲದ ಹೊರೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಭಿವೃದ್ಧಿ ಕಾರ್ಯಗಳಿಗಾಗಿ ನಿಯಮದ ಮಿತಿಯಲ್ಲೇ ಸಾಲ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು. ಪ್ರಧಾನಿ ಮೋದಿ ಅವಧಿಯ ಸಾಲವನ್ನು ಪ್ರಶ್ನಿಸಿದ ಸಿಎಂ, ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಹಿನ್ನಡೆಯಾಗಿದೆಯೇ ಹೊರತು ತಮ್ಮ ಬಜೆಟ್‌ನಿಂದಲ್ಲ ಎಂದರು.

ಈ ಬಾರಿಯ ಬಜೆಟ್ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ, ಇದು ಸರ್ವರ ಅಭಿವೃದ್ಧಿಯ ಬಜೆಟ್ ಎಂದು ಸಿದ್ದರಾಮಯ್ಯ ನುಡಿದರು. ಪಕ್ಷದ ವರಿಷ್ಠರ ಮೇಲೆ ತಮಗೆ ಸಂಪೂರ್ಣ ವಿಶ್ವಾಸವಿದ್ದು, ಹೈಕಮಾಂಡ್ ನೀಡುವ ಯಾವುದೇ ನಿರ್ದೇಶನಕ್ಕೆ ತಾವು ಬದ್ಧವಾಗಿರುವುದಾಗಿ ಅವರು ಪುನರುಚ್ಚರಿಸಿದರು.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page