;
top of page

ಬಸ್ ಟಿಕೆಟ್ ದರ ಭಾರಿ ಹೆಚ್ಚಳಕ್ಕೆ ಸರ್ಕಾರದ ಮುಂದೆ ಸಾರಿಗೆ ನಿಗಮಗಳ ಪ್ರಸ್ತಾವನೆ

  • Jun 22
  • 1 min read

ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್ ದರ ಏರಿಕೆಯಿಂದ ತತ್ತರಿಸಿರುವ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಖ್ಯಮಂತ್ರಿಗಳಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ.

ಕಳೆದ ವರ್ಷವಷ್ಟೇ ದರ ಹೆಚ್ಚಳವಾಗಿದ್ದರೂ, ಪ್ರಸ್ತುತ ಬಿಎಂಟಿಸಿ ಶೇಕಡಾ 44 ರಷ್ಟು ಹಾಗೂ ಕೆಎಸ್ಆರ್‌ಟಿಸಿ ಶೇಕಡಾ 33 ರಷ್ಟು ಟಿಕೆಟ್ ದರ ಏರಿಕೆ ಮಾಡಲು ಅನುಮತಿ ಕೋರಿವೆ. ಇದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಪ್ರತಿನಿತ್ಯದ ಇಂಧನ ದರ ಏರಿಕೆಯಿಂದಾಗಿ ನಿಗಮಗಳಿಗೆ ವರ್ಷಕ್ಕೆ 480 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುತ್ತಿದೆ. ಸರ್ಕಾರದ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು, ದರ ಪರಿಷ್ಕರಣೆ ಅನಿವಾರ್ಯ ಎಂದು ಸಂಸ್ಥೆಗಳು ತಿಳಿಸಿವೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page