ಬಸ್ ಮತ್ತು ಟಿಪ್ಪರ್ ಢಿಕ್ಕಿ, 10 ಮಂದಿ ಸಜೀವ ದಹನ

ಮಾರ್ಕಪುರಂ ಸಮೀಪದ ರಾಯವರಂ ಬಳಿ ಹರಿಕೃಷ್ಣ ಟ್ರಾವೆಲ್ಸ್‌ಗೆ ಸೇರಿದ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಭೀಕರ ದುರಂತ ನಡೆದಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದ್ದು, ಬಸ್‌ನಲ್ಲಿದ್ದ ಸುಮಾರು 10 ಪ್ರಯಾಣಿಕರು ಹೊರಬರಲಾಗದೆ ಸಜೀವವಾಗಿ ದಹನವಾಗಿದ್ದಾರೆ. ಬೆಳಿಗ್ಗೆ 6 ರಿಂದ 6:30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಜಗಿತಿಯಾಲ್‌ನಿಂದ ವಿಂಜಾಮುರಿಗೆ ತೆರಳುತ್ತಿದ್ದ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಘಟನೆಯಿಂದಾಗಿ ರಸ್ತೆಯಲ್ಲಿ ಸಂಚಾರ ವ್ಯತ್ಯಯ ಉಂಟಾಗಿತ್ತು. ಮೃತಪಟ್ಟವರ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.







Comments