;
top of page

ಬಸ್ಸಿನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನ

Aug 19
1 min read

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಮೇಲೆ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆಗಸ್ಟ್ 15 ರಂದು ಸಂತ್ರಸ್ತ ಬಾಲಕನು ಅಳಿಕೆಯಿಂದ ಪುತ್ತೂರಿಗೆ ಬಸ್ಸಿನಲ್ಲಿ ಹೋಗುತ್ತಿದ್ದಾಗ, ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸನ್ನೇರಿದ ಆರೋಪಿಯು ಬಾಲಕನ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ್ದನು.

ಇಷ್ಟಕ್ಕೇ ನಿಲ್ಲಿಸದ ಆರೋಪಿಯು, ಬಾಲಕನು ಮನೆಗೆ ತೆರಳಿದಾಗ ಆತನನ್ನು ಹಿಂಬಾಲಿಸಿಕೊಂಡು ಮನೆಗೇ ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದನು. ಇದರಿಂದ ಧೃತಿಗೆಡದ ಬಾಲಕ ಮತ್ತು ಆತನ ಕುಟುಂಬಸ್ಥರು ವಿಟ್ಲ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ಪೋಕ್ಸೋ (POCSO) ಕಾಯ್ದೆ ಹಾಗೂ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ದೂರು ದಾಖಲಾಗುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ವಿಟ್ಲ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿ ಉಮೇಶ್‌ ನನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page