;
top of page

ಕಾರು ಹಾಗೂ ಬೈಕ್ ಭೀಕರ ಅಪಘಾತ: ಸುಳ್ಯದ ಇಯಾಸ್ ಸೇರಿ ಮೂವರು ಸಾವು

Oct 11
1 min read

ಕೇರಳದ ನೆಡುಂಬಸ್ಸೇರಿ ಸಮೀಪದ ಮೂಝಿಯಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಕೊಡಗಿನ ಇಯಾಸ್ (22), ವಯನಾಡಿನ ದೇವಿಕಾ ಹಾಗೂ ಪಾಲಕ್ಕಾಡ್‌ನ ಗೋಪಿಕಾ ಸೇರಿದಂತೆ ಮೂವರು ದುರ್ಮರಣ ಹೊಂದಿದ್ದಾರೆ.

ಭಾನುವಾರ ಮುಂಜಾನೆ 1.45ರ ಸುಮಾರಿಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಮೂವರಿಗೂ ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಇವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ದುರ್ಘಟನೆ ಕುರಿತು ನೆಡುಂಬಸ್ಸೇರಿ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page