ಕಾರಿನಲ್ಲಿ ಉಸಿರುಗಟ್ಟಿ ಮೂರು ವರ್ಷದ ಮಗು ಸಾವು

ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ಕಾರಿನೊಳಗೆ ಉಸಿರುಗಟ್ಟಿ ಮೂರು ವರ್ಷದ ಮಗು ಮೃತಪಟ್ಟಿರುವ ಧೃತಿಗೆಡಿಸುವ ಘಟನೆ ನಡೆದಿದೆ. ಕೊಟ್ಟುರೇಶ್ವರ ಎಂಬವರ ಪುತ್ರ ಬಸವಪ್ರಭು ಮೃತ ದುರ್ದೈವಿಯಾಗಿದ್ದಾನೆ.
ಪೋಷಕರು ಮಗುವನ್ನು ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಕಾರನ್ನು ಲಾಕ್ ಮಾಡದೇ ಪಾರ್ಕ್ ಮಾಡಿ ತೆರಳಿದ್ದರು. ಈ ವೇಳೆ ಮಗು ಆಟವಾಡುತ್ತಾ ಕಾರಿನೊಳಗೆ ಪ್ರವೇಶಿಸಿದ್ದು, ತಾನಾಗಿಯೇ ಕಾರಿನ ಎಲ್ಲಾ ಡೋರ್‌ಗಳು ಲಾಕ್ ಆಗಿವೆ.
ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮಗುವಿಗಾಗಿ ಹುಡುಕಾಡಿದ ಪೋಷಕರು, ಕೊನೆಗೆ ಕಾರು ತೆರೆದು ನೋಡಿದಾಗ ಮಗು ಶವವಾಗಿ ಪತ್ತೆಯಾಗಿದೆ. ಈ ಕುರಿತು ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.







Comments