ಇಂದು ವರ್ಷದ ಮೊದಲ ಚಂದ್ರ ಗ್ರಹಣ: ದೇವಸ್ಥಾನಗಳ ಪೂಜಾ ಸಮಯದಲ್ಲಿ ಬದಲಾವಣೆ
- Mar 3
- 1 min read

ಈ ವರ್ಷದ ಮೊದಲ ಕೇತುಗ್ರಸ್ತ ಚಂದ್ರ ಗ್ರಹಣವು ಇಂದು ಸಂಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಮುಖ ದೇವಸ್ಥಾನಗಳ ಪೂಜಾ ಮತ್ತು ದರ್ಶನದ ಸಮಯದಲ್ಲಿ ಗಣನೀಯ ಬದಲಾವಣೆ ಮಾಡಲಾಗಿದೆ. ಗ್ರಹಣದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇವಾಲಯಗಳ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ.
ಮಧ್ಯಾಹ್ನ 3 ಗಂಟೆಯಿಂದಲೇ ಗ್ರಹಣ ಪ್ರಕ್ರಿಯೆ ಆರಂಭವಾಗಲಿದ್ದರೂ, ಚಂದ್ರೋದಯದ ನಂತರ ಅಂದರೆ ಸಂಜೆ 6.26ಕ್ಕೆ ಗೋಚರಿಸಲಿದೆ. ಈ ಖಗೋಳ ವಿದ್ಯಮಾನವು ಸಂಜೆ 6.47ಕ್ಕೆ ಮುಕ್ತಾಯವಾಗಲಿದ್ದು, ಅಲ್ಲಿಯವರೆಗೆ ದೇವಸ್ಥಾನಗಳ ಗರ್ಭಗುಡಿಯನ್ನು ಮುಚ್ಚಲಾಗುವುದು ಹಾಗೂ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಗ್ರಹಣ ಮುಕ್ತಾಯವಾದ ನಂತರ ಅಂದರೆ ಸಂಜೆ 7 ಗಂಟೆಯ ಬಳಿಕವಷ್ಟೇ ದೇವಸ್ಥಾನಗಳನ್ನು ಶುಚಿಗೊಳಿಸಿ ವಿಶೇಷ ಪೂಜೆ-ಪುನಸ್ಕಾರಗಳನ್ನು ನೆರವೇರಿಸಲಾಗುತ್ತದೆ. ಭಕ್ತರು ಸಂಜೆಯ ನಂತರವಷ್ಟೇ ದೇವರ ದರ್ಶನ ಪಡೆಯಲು ಅವಕಾಶವಿದ್ದು, ಸಾರ್ವಜನಿಕರು ಈ ಸಮಯದ ಬದಲಾವಣೆಯನ್ನು ಗಮನಿಸಬೇಕೆಂದು ಸೂಚಿಸಲಾಗಿದೆ.







Comments