;
top of page

ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ತಯಾರಿಕೆ: ಮಹಾರಾಷ್ಟ್ರದಲ್ಲಿ ಇಬ್ಬರು ಕನ್ನಡಿಗರು ಸೇರಿ ಏಳು ಮಂದಿಯ ಬಂಧನ

Aug 24
1 min read

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ರಾಜಗೋಳಿ ಗ್ರಾಮದಲ್ಲಿ ಕೋಳಿ ಫಾರ್ಮ್‌ ಹೆಸರಿನಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಎಂಡಿಎಂಎ (MDMA) ಮಾದಕ ವಸ್ತು ತಯಾರಿಕಾ ಫ್ಯಾಕ್ಟರಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ (Anti-Narcotics Task Force) ನಡೆಸಿದ ಈ ಭಾರಿ ಕಾರ್ಯಾಚರಣೆಯಲ್ಲಿ ಬೆಳಗಾವಿಯ ಇಬ್ಬರು ಆರೋಪಿಗಳು ಸೇರಿದಂತೆ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಂದ ಸುಮಾರು 1.13 ಕೋಟಿ ರೂಪಾಯಿ ಮೌಲ್ಯದ 208 ಗ್ರಾಂ ತೂಕದ ಎಂಡಿಎಂಎ ಡ್ರಗ್ಸ್, ಮಾದಕ ದ್ರವ್ಯ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ವಸ್ತುಗಳು ಹಾಗೂ ಯಂತ್ರೋಪಕರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರಹಸ್ಯವಾಗಿ ನಡೆಯುತ್ತಿದ್ದ ಈ ಜಾಲದ ಮೂಲಕ ತಯಾರಾಗುತ್ತಿದ್ದ ಮಾದಕ ವಸ್ತುಗಳನ್ನು ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ದಾಳಿ ನಡೆದ ರಾಜಗೋಳಿ ಗ್ರಾಮವು ಕರ್ನಾಟಕದ ಬೆಳಗಾವಿ ಜಿಲ್ಲೆಯ ಗಡಿಯಿಂದ ಕೇವಲ 20 ಕಿಲೋಮೀಟರ್ ದೂರದಲ್ಲಿದೆ. ಗಡಿ ಭಾಗದ ಸನಿಹದಲ್ಲೇ ಕೋಳಿ ಫಾರ್ಮ್ ಮರೆಯಲ್ಲಿದ್ದ ಈ ಅಕ್ರಮ ಫ್ಯಾಕ್ಟರಿ ಪತ್ತೆಯಾಗಿರುವುದು ಗಡಿ ಜಿಲ್ಲೆಗಳ ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸಿದ್ದು, ಪೊಲೀಸರು ಜಾಲದ ಹಿನ್ನೆಲೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page