;
top of page

ಡಿಕೆ ಶಿವಕುಮಾರ್ ಸಿಎಂ ಆಗಿ ಇಂದು ಪ್ರಮಾಣವಚನ: ಸರ್ಕಾರಿ ನೌಕರರಿಗೆ ಅರ್ಧದಿನ ರಜೆ!

  • Jun 3
  • 1 min read

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಧ್ಯಾಹ್ನದ ನಂತರ ರಜೆ ಘೋಷಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಈ ಐತಿಹಾಸಿಕ ಪ್ರಮಾಣ ವಚನ ಸಮಾರಂಭವು ಇಂದು ಅಪರಾಹ್ನ 4:05 ಗಂಟೆಗೆ ಬೆಂಗಳೂರಿನ ‘ಲೋಕಭವನ’ದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಹಾಗೂ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದೆ.

ಸಮಾರಂಭದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ದೃಷ್ಟಿಯಿಂದ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page