;
top of page

ಸಿಎಂ ರಾಜೀನಾಮೆ ಸಂದಿಗ್ಧ: ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು

  • May 28
  • 1 min read

ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಹತ್ತಿರದ ಸಂಬಂಧಿಯೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ತುರ್ತಾಗಿ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹುದ್ದೆಗೆ ರಾಜೀನಾಮೆ ನೀಡಲು ರಾಜ್ಯಪಾಲರ ಭೇಟಿಗೆ ಸಮಯ ಕೋರಿದ್ದರು. ರಾಜಭವನವು ಇಂದು ಬೆಳಗ್ಗೆ ಹಾಗೂ ಮಧ್ಯಾಹ್ನ ಭೇಟಿಗೆ ಅವಕಾಶ ನೀಡಿತ್ತು. ಸಿಎಂ ಭೇಟಿಗೆ ಕೆಲವೇ ಗಂಟೆಗಳಿರುವಾಗ ರಾಜ್ಯಪಾಲರು ರಾಜಧಾನಿ ತೊರೆದಿರುವುದು ಕುತೂಹಲ ಮೂಡಿಸಿದೆ.

ರಾಜ್ಯಪಾಲರು ಇಂದೇ ಮರಳಿ ಬರುವ ಬಗ್ಗೆ ಖಚಿತತೆಯಿಲ್ಲ. ಒಂದು ವೇಳೆ ಅವರು ವಾಪಸಾದರೆ, ಮಧ್ಯಾಹ್ನ 3 ಗಂಟೆಯ ನಂತರ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆಯಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page