ಇನ್ಮುಂದೆ ಯಾವ ಚುನಾವಣೆಯಲ್ಲೂ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಬಾಂಬ್!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಯಾವುದೇ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದಿವಂಗತ ವೀರಣ್ಣನವರ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ನಿರ್ಧಾರಕ್ಕೆ ವಯಸ್ಸಿನ ಕಾರಣಕ್ಕಿಂತ ಇಂದಿನ ದುಬಾರಿ ಚುನಾವಣಾ ವ್ಯವಸ್ಥೆಯೇ ಮುಖ್ಯ ಕಾರಣ ಎಂದಿದ್ದಾರೆ.
"ಈಗ ಚುನಾವಣೆ ಎದುರಿಸಲು ಟನ್ ಗಟ್ಟಲೆ ಹಣ ಬೇಕು. ವ್ಯವಸ್ಥೆ ಸುಧಾರಿಸದಿದ್ದರೆ ಪ್ರಾಮಾಣಿಕವಾಗಿ ರಾಜಕಾರಣ ಮಾಡಲು ಸಾಧ್ಯವಿಲ್ಲ" ಎಂದು ಕಳವಳ ವ್ಯಕ್ತಪಡಿಸಿದರು. 1991ರ ಕೊಪ್ಪಳ ಲೋಕಸಭಾ ಸೋಲನ್ನು ನೆನಪಿಸಿಕೊಂಡ ಅವರು, ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ ಆದರೆ ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.







Comments