ಫೆಬ್ರವರಿ 27ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಮಂಗಳೂರು: Karnataka ರಾಜ್ಯದ ಕರಾವಳಿ ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಲಕ್ಷಣಗಳು ಕಾಣಿಸಿಕೊಂಡಿವೆ. Dakshina Kannada ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಬಿಸಿಲು-ಮೋಡ ಕವಿದ ವಾತಾವರಣ ಹಾಗೂ ಸೆಖೆ ಮುಂದುವರಿಯಲಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ Sri Lanka ಸಮೀಪ ಕೇಂದ್ರೀಕೃತವಾಗಿರುವ ವಾಯುಭಾರ ಕುಸಿತ ಪೂರ್ವದತ್ತ ಚಲಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಆರಂಭಿಕ ಮುನ್ಸೂಚನೆಗಿಂತ ಮಳೆಯ ಪ್ರಮಾಣ ತುಸು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಇದೀಗಾಗಲೇ ದಕ್ಷಿಣ ಕನ್ನಡದ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ದಿನಗಳಲ್ಲಿ Kasaragod, Udupi ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಮುಂದುವರಿಯಲಿದೆ.
ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದೆ.
ವೈಋತ್ಯ ಬಂಗಾಳ ಕೊಲ್ಲಿಯ ಮೇಲೆ ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿ ಸಮೀಪ ಸುಳಿಗಾಳಿ ನಿರ್ಮಾಣವಾಗಿದ್ದು, ಸಣ್ಣ ಮಟ್ಟದ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗಿದೆ. ಇದರ ಪರಿಣಾಮವಾಗಿ ತೇವಾಂಶಭರಿತ ಮೋಡಗಳು ಕರ್ನಾಟಕ ಮತ್ತು ಕೇರಳದತ್ತ ಚಲಿಸುತ್ತಿದ್ದು, ಮುಂದಿನ ಐದು ದಿನಗಳ ಕಾಲ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ







Comments