ಕಾಲೇಜು ಚುನಾವಣೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ತಾರತಮ್ಯ ಮಾಡಬೇಡಿ: ಪವನ್ ಕುಮಾರ್ ಶಿರ್ವ ಒತ್ತಾಯ

ಮಂಗಳೂರು ವಿಶ್ವವಿದ್ಯಾಲಯದ ಕಾಲೇಜು ಚುನಾವಣೆಯು ‘ಎಲ್ಲಾ ವಿದ್ಯಾರ್ಥಿಗಳು ಒಂದೇ’ ಎಂಬುದಕ್ಕೆ ಸಾಕ್ಷಿಯಾಗಿದೆ. ಆದ್ದರಿಂದ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಮಧ್ಯೆ ತಾರತಮ್ಯ ಮಾಡಬಾರದು ಎಂದು ಪವನ್ ಕುಮಾರ್ ಶಿರ್ವ ಹೇಳಿದ್ದಾರೆ.
ಈ ಹಿಂದೆ ನಡೆದುಕೊಂಡು ಬಂದಿರುವ ಪದ್ಧತಿ ಮತ್ತು ಸಂಪ್ರದಾಯದಂತೆಯೇ ಮುಂದೆಯೂ ಕಾಲೇಜು ಚುನಾವಣೆಗಳನ್ನು ನಡೆಸುವುದು ಅತ್ಯಂತ ಸೂಕ್ತವಾಗಿದೆ. ಇದು ವಿದ್ಯಾರ್ಥಿಗಳಲ್ಲಿ ಸಮಾನತೆ ಮತ್ತು ಒಗ್ಗಟ್ಟನ್ನು ಕಾಯ್ದುಕೊಳ್ಳಲು ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.







Comments