;
top of page

ಸಿಪಿಎಸ್‌ ಪರೀಕ್ಷೆ: ಕೆಇಎಯಿಂದ ತಾತ್ಕಾಲಿಕ ಕೀ ಉತ್ತರ ಪ್ರಕಟ

Aug 4
1 min read

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಆಗಸ್ಟ್ 2 ರಂದು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಿದ್ದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಸಿಪಿಸಿ) ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದು. ಕೆಇಎ ಬಿಡುಗಡೆ ಮಾಡಿರುವ ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅವುಗಳನ್ನು ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 6 ರ ಬೆಳಿಗ್ಗೆ 10.30 ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಆಕ್ಷೇಪಣೆ ಸಲ್ಲಿಸಲು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page