ಸಿಲಿಂಡರ್ ಅಭಾವದ ನಡುವೆ ಗ್ಯಾಸ್ ಸಿಲಿಂಡರ್ ಕಳ್ಳತನ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕೃತ್ಯ!
- Mar 11
- 1 min read

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸಿಲಿಂಡರ್ ಕಳ್ಳರ ಹಾವಳಿ ಮಿತಿಮೀರಿದೆ. ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಅಭಾವ ಸೃಷ್ಟಿಯಾಗಿರುವ ಬೆನ್ನಲ್ಲೇ, ಚನ್ನಪಟ್ಟಣದ ಕನಕನಗರದಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ನಿವಾಸಿ ಕೃಷ್ಣಪ್ಪ ಎಂಬುವವರ ಮನೆಯ ಕಾಂಪೌಂಡ್ ಒಳಗೆ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಅನ್ನು ಕಳ್ಳರು ಯಾರಿಗೂ ತಿಳಿಯದಂತೆ ಹೊತ್ತೊಯ್ದಿದ್ದಾರೆ.

ಈ ಕಳ್ಳತನದ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ಒಳಬಂದ ಕಳ್ಳ, ಅಡುಗೆ ಅನಿಲದಿಂದ ತುಂಬಿದ್ದ ಪೂರ್ಣ ಪ್ರಮಾಣದ ಸಿಲಿಂಡರ್ ಅನ್ನು ಸುಲಭವಾಗಿ ಎಗರಿಸಿದ್ದಾನೆ. ಸಿಲಿಂಡರ್ ಬೆಲೆ ಏರಿಕೆ ಮತ್ತು ಅಭಾವದ ನಡುವೆ ಇಂತಹ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.
ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತರು ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದು, ಕಳ್ಳನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸಾರ್ವಜನಿಕರು ತಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಪೊಲೀಸರು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.







Comments