;
top of page

ಮೀನುಗಾರರ ವಹಿವಾಟು ಬಂದ್‌ಗೆ ಡಿ.ಕೆ.ಶಿವಕುಮಾರ್ ಕೆಂಡ: ಅಧಿಕಾರಿಗಳ ಅಮಾನತಿಗೆ ಸೂಚನೆ

5 minutes ago
1 min read

ಮೀನುಗಾರಿಕೆ ಢಕ್ಕೆಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೋಟ್ ಏರಿ ಪರಿಶೀಲನೆ ನಡೆಸಿ, ಸ್ಥಳೀಯ ಮೀನುಗಾರರೊಂದಿಗೆ ಸಂವಾದ ನಡೆಸಿದರು.


ಆದರೆ, ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಢಕ್ಕೆಯಲ್ಲಿ ವ್ಯಾಪಾರ ವಹಿವಾಟುಗಳನ್ನು ಸಂಪೂರ್ಣ ಬಂದ್ ಮಾಡಿಸಿ, ಖಾಲಿಗೊಳಿಸಲಾಗಿತ್ತು. ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್, "ಅನೇಕ ಸ್ಥಳೀಯ ಹಾಗೂ ಹೊರರಾಜ್ಯದ ಕಾರ್ಮಿಕರು ಇದನ್ನೇ ನಂಬಿ ಬದುಕುತ್ತಿದ್ದಾರೆ. ನಮ್ಮ ಭೇಟಿಯಿಂದ ಅವರ ದೈನಂದಿನ ಜೀವನ ಮತ್ತು ವ್ಯಾಪಾರಕ್ಕೆ ಅಡ್ಡಿಯಾಗಬಾರದಿತ್ತು" ಎಂದರು.


ಈ ಘಟನೆ ಕುರಿತು ತಕ್ಷಣ ತನಿಖೆ ನಡೆಸಿ, ವ್ಯಾಪಾರ ಬಂದ್‌ ಮಾಡಿಸಿದ ಜವಾಬ್ದಾರಿಯುತ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸ್ಥಳದಲ್ಲೇ ಖಡಕ್ ಸೂಚನೆ ನೀಡಿದರು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page