;
top of page

ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿತ; ಎಂಟು ಮಂದಿಗೆ ಗಾಯ

  • Apr 25
  • 1 min read

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಎಂಟು ಮಂದಿ ಗಾಯಗೊಂಡಿದ್ದಾರೆ. ತಾಕೋಡೆ ಬರ್ಕೆ ಧರ್ಮನೇಮಕ್ಕೆ ದೈವದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸಂಕವು ಏಕಾಏಕಿ ಕುಸಿದ ಪರಿಣಾಮ ಪಲ್ಲಕ್ಕಿ ಉರುಳಿ ಬಿದ್ದಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಅವಘಡದಲ್ಲಿ ಪಲ್ಲಕ್ಕಿಯಲ್ಲಿದ್ದ ದೈವದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯುಂಟಾಗಿದೆ. ಪಲ್ಲಕ್ಕಿ ಹೊತ್ತವರು ಮತ್ತು ಮೆರವಣಿಗೆಯಲ್ಲಿದ್ದ ಭಕ್ತರು ನೀರಿನಲ್ಲಿ ಬಿದ್ದಿದ್ದು, ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಯಿತು. ಧಾರ್ಮಿಕ ಕಾರ್ಯಕ್ರಮದ ಸಂಭ್ರಮದಲ್ಲಿದ್ದ ಭಕ್ತರಲ್ಲಿ ಈ ಘಟನೆಯು ಆತಂಕ ಮತ್ತು ವಿಷಾದವನ್ನುಂಟು ಮಾಡಿದೆ.




Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page