ಭಾರೀ ಮಳೆ ಹಿನ್ನೆಲೆ: ಜು. 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ರಜೆ

ಮಂಗಳೂರು, ಜು. 24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ, ಜುಲೈ 25 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು, ಪದವಿಪೂರ್ವ (ಪಿಯು) ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.








Comments