;
top of page

ದಕ್ಷಿಣ ಕನ್ನಡದಲ್ಲಿ ನವರಾತ್ರಿ ಮೆರವಣಿಗೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್!

Oct 15
1 min read

ಮಂಗಳೂರು: ನವರಾತ್ರಿ ಹಬ್ಬದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಶಾರದಾ ಮಹೋತ್ಸವ ಹಾಗೂ ಮೆರವಣಿಗೆಗಳ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ನಿಗದಿತ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಬಾರ್‌ಗಳು, ವೈನ್ ಶಾಪ್‌ಗಳು ಸೇರಿದಂತೆ ಮದ್ಯ ಮಾರಾಟ ಮಾಡುವ ಎಲ್ಲಾ ಸಂಸ್ಥೆಗಳು ಈ ಅವಧಿಯಲ್ಲಿ ಬಂದ್ ಇರಬೇಕಾಗುತ್ತದೆ. ನವರಾತ್ರಿ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page