ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ - ಯಾರ ಜೊತೆ ಮೈತ್ರಿ?
- May 5
- 1 min read

ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಸಿರುವ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತಕ್ಕೆ 10 ಸ್ಥಾನಗಳ ಕೊರತೆಯನ್ನು ಎದುರಿಸುತ್ತಿದೆ. ಆದರೂ, ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವುದು ಸಂಚಲನ ಮೂಡಿಸಿದೆ.
ಟಿವಿಕೆ ಮುಖ್ಯಸ್ಥ ವಿಜಯ್ ಅವರು ರಾಜ್ಯಪಾಲರಿಗೆ ಪತ್ರ ಬರೆದು, ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಮುಂದಿನ ಎರಡು ವಾರಗಳಲ್ಲಿ ಸದನದಲ್ಲಿ ತಮ್ಮ ಬಹುಮತವನ್ನು ಸಾಬೀತುಪಡಿಸುವುದಾಗಿ ಭರವಸೆ ನೀಡಿದ್ದಾರೆ.

ಈ ನಿರ್ಣಾಯಕ ಹಂತದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಿಜಯ್ ಅವರು ತಮ್ಮ ಪಕ್ಷದ ಎಲ್ಲಾ ವಿಜೇತ ಅಭ್ಯರ್ಥಿಗಳನ್ನು ತುರ್ತು ಸಭೆಗೆ ಆಹ್ವಾನಿಸಿದ್ದಾರೆ.







Comments