ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳವರೆಗೆ ಹೊಸ ರೈಲು ಸಂಪರ್ಕಕ್ಕೆ ಸರ್ವೆ
- sathyapathanewsplu
- Jan 8
- 1 min read

ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದವರೆಗೆ ಹೊಸ ರೈಲು ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆ ರೂಪುಗೊಳ್ಳುತ್ತಿದೆ ಎಂದು ರೈಲ್ವೇ ಖಾತೆಯ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಬೆಂಗಳೂರು–ಮಂಗಳೂರು ನಡುವಿನ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಈ ಮಾರ್ಗದಲ್ಲಿ ಶೀಘ್ರದಲ್ಲೇ ವಂದೇ ಭಾರತ್ ರೈಲು ಆರಂಭಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ, ಧಾರ್ಮಿಕ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಪ್ರಮುಖ ಕೇಂದ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ನಡುವೆ ನೇರ ರೈಲು ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಹೊಸ ರೈಲು ಮಾರ್ಗದ ಸಮೀಕ್ಷೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಸಮೀಕ್ಷಾ ವರದಿ ಆಧರಿಸಿ ಮುಂದಿನ ಹಂತದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಈ ರೈಲು ಮಾರ್ಗ ಜಾರಿಗೆ ಬಂದರೆ, ಯಾತ್ರಿಕರು ಹಾಗೂ ಪ್ರವಾಸಿಗರಿಗೆ ಸುಲಭ ಸಂಚಾರ ವ್ಯವಸ್ಥೆ ಲಭ್ಯವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.





Comments