ದರ್ಶನ್‌ಗೆ ಮಾಫಿ ಸಾಕ್ಷಿ ಸಂಕಷ್ಟ? ದೈವದ ಮೊರೆ ಹೋದ ವಿಜಯಲಕ್ಷ್ಮಿ

ಮಂದಾರಬೈಲು ಶ್ರೀರಕ್ತೇಶ್ವರಿ–ಗುಳಿಗ ದೈವ ಸನ್ನಿಧಿಯಲ್ಲಿ ವಿಶೇಷ ಕೋಲ ಸೇವೆ
ಮಂಗಳೂರಿನ ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತೆ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಕೋಲ ಸೇವೆ ಸಲ್ಲಿಸಿದ್ದಾರೆ.
ದೈವದ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ, ಹರಕೆ ಸಲ್ಲಿಸಿರುವ ವಿಜಯಲಕ್ಷ್ಮಿ, ಕುಟುಂಬದ ಸಂಕಷ್ಟಗಳು ದೂರವಾಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.

ದರ್ಶನ್ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ವಿಜಯಲಕ್ಷ್ಮಿ ದೈವದ ಮೊರೆ ಹೋಗಿರುವುದು ಗಮನ ಸೆಳೆದಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳ ನಡುವೆ ದೈವಾನುಗ್ರಹಕ್ಕಾಗಿ ವಿಶೇಷ ಸೇವೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ವಿಶೇಷ ಕೋಲ ಸೇವೆ, ಪೂಜೆ ಹಾಗೂ ಹರಕೆಯ ಮೂಲಕ ಕುಟುಂಬದ ಸಂಕಷ್ಟ ನಿವಾರಣೆಗೆ ವಿಜಯಲಕ್ಷ್ಮಿ ಪ್ರಾರ್ಥನೆ ಸಲ್ಲಿಸಿದ್ದಾರೆ.







Comments